ಕಳಸ ಲೈವ್ ವರದಿ
ರಾಜ್ಯದಾದ್ಯಂತ ಹಾಗೂ ಅದರಲ್ಲಿ ಹೆಚ್ಚಾಗಿ ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಅರಣ್ಯ ಇಲಾಖೆಯವರ ಒತ್ತುವರಿ ತೇರವಿನ ಬಗ್ಗೆ ಮಾನ್ಯ ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರನ್ನು ಹೊರನಾಡು ಶ್ರೀ ಕ್ಷೇತ್ರದ ಶ್ರೀ ಜಿ ರಾಮನಾರಾಯಣ ಜೋಶಿಯವರು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ರಾಮನಾರಾಯಣ ಜೋಷಿಯವರು ಮಖ್ಯಮಂತ್ರಿಗಳನ್ನು ಬೇಟಿ ಮಾಡಿ ಅರಣ್ಯ ಇಲಾಖೆಯವರಿಂದ ಆಗುತ್ತಿರುವ ತೊಂದರೆಯನ್ನು ಶೀಘ್ರವಾಗಿ ಬಗೆಹರಿಸಿಕೊಡುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಅತಿ ಶೀಘ್ರವಾಗಿ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.


