ಕಳಸ ಲೈವ್ ವರದಿ
ಆದಿಶಕ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರೀ ದೇವಸ್ಥಾನ ಶ್ರೀ ಕ್ಷೇತ್ರ ಹೊರನಾಡು ತಾ|| 16-08-2024ನೇ ಶುಕ್ರವಾರದಂದು ಶ್ರೀ ವರಮಹಾಲಕ್ಷ್ಮೀ ವ್ರತ, ಕೋಟಿಕುಂಕುಮಾರ್ಚನೆ, ಲಕ್ಷದೂರ್ವಾಚನೆ ಮತ್ತು ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನದ ಧರ್ಮಕರ್ತರಾದ ಜಿ.ಭೀಮೇಶ್ವರ ಜೋಷಿ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ ಬೆಳಗ್ಗೆ 9:00ಗೆ ಧಾರ್ಮಿಕ ಕಾರ್ಯಕ್ರಮಗಳಾದ , ಶ್ರೀ ವರಮಹಾಲಕ್ಷ್ಮೀ ವ್ರತ ಆಚರಣೆ, ಲಕ್ಷದೂರ್ವಾರ್ಚನೆ, ಕೋಟಿ ಕುಂಕುಮಾರ್ಚನೆ ಪ್ರಾರಂಭವಾಗುತ್ತದೆ.
ಮಧ್ಯಾಹ್ನ 12 ಗಂಟೆಗೆ ಶ್ರೀ ಲಲಿತಾಕಲಾ ಮಂಟಪದಲ್ಲಿ ಶ್ರೀಕ್ಷೇತ್ರದ ಗ್ರಾಮೀಣಾಭಿವೃದ್ಧಿ ಯೋಜನೆಯ ಗೃಹಲಕ್ಷ್ಮೀ ಯೋಜನೆಯಲ್ಲಿ “ಉಚಿತ ಹೆಂಚು ವಿತರಣೆ”, ಆನಂದ ಜ್ಯೋತಿ ಯೋಜನೆಯಲ್ಲಿ, “ವಿದ್ಯುತ್ ಸಂಪರ್ಕ ಪತ್ರ ವಿತರಣೆ” ಕೃಷಿ ಸಮೃದ್ಧಿಯೋಜನೆಯಲ್ಲಿ, “ರೈತರಿಗೆ ಕೃಷಿ ಉಪಕರಣಗಳ ವಿತರಣೆ” ಅನ್ನದಾಸೋಹ ಯೋಜನೆಯಲ್ಲಿ “ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಮತ್ತು ಆಯ್ದ ದೇವಸ್ಥಾನಗಳಿಗೆ ತಟ್ಟೆ-ಲೋಟಗಳ ವಿತರಣೆ”, ಮಹಿಳಾಭಿವೃದ್ಧಿ ಯೋಜನೆಯಲ್ಲಿ “ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ”, ಶೈಕ್ಷಣಿಕ ಅಭಿವೃದ್ಧಿ ಯೋಜನೆಯಲ್ಲಿ “ಕಳಸ ತಾಲ್ಲೂಕಿನ ಶಾಲಾ ಮಕ್ಕಳಿಗೆ ಟಿಪ್ಪಣಿ ಪುಸ್ತಕಗಳ ವಿತರಣೆ” ಹಾಗೂ ಪ್ರೌಢ ಶಾಲೆಗಳು, ಪದವಿ ಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ ಅಂದು ಕೇಂದ್ರ ಸಚಿವ ವಿ ಸೋಮಣ್ಣ, ಉಪಸಭಾಪತಿ ಎಂ.ಕೆ.ಪ್ರಾಣೇಶ್, ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ವಿದಾನ ಪರಿಷತ್ತು ಸದಸ್ಯರಾದ ಸಿ.ಟಿ.ರವಿ, ಎಸ್.ಎಲ್. ಭೋಜೆಗೌಡ್ರು, ಕಳಸ ಬಿಜೆಪಿ ಅಧ್ಯಕ್ಷ ನಾಗಭೂಷನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೇಣಿಕ್ ಜೈನ್, ಜೆಡಿಎಸ್ ಅಧ್ಯಕ್ಷ ಎಂ.ಬಿ. ಸಂತೋಷ್, ಕೆಸಿಎ ಬ್ಯಾಂಕ್ ಅಧ್ಯಕ್ಷ ಜಿ.ಕೆ.ಮಂಜಪ್ಪಯ್ಯ, ಹೊರನಾಡು ಗ್ರಾ.ಪಂ ಅಧ್ಯಕ್ಷ ಮಧುಪ್ರಸಾದ್ ಜೈನ್ ಉಪಸ್ಥಿತಿ ಇರುವರು.
ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 6.30ರಿಂದ ಡಾ.ವಿದುಷಿ ಪ್ರಿಯಾ ಗಣೇಶ್ ಸಮುದ್ಭವ ಮತ್ತು ಸಾಂಸ್ಕøತಿಕ ಸಂಸ್ಥೆ ಬೆಂಗಳೂರು ತಂಡದಿಂದ ಭರತ ನಾಟ್ಯ ಕಾರ್ಯಕ್ರಮ ಇರುತ್ತದೆ ಎಂದು ತಿಳಿಸಿದ್ದಾರೆ.


