ಕಳಸ ಲೈವ್ ವರದಿ
2024-25 ನೇ ಸಾಲಿನ ಕಳಸ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಳಸ ಜೆಇಎಂ ಶಾಲೆಯು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.
ಕಳಸ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟವು ದಿನಾಂಕ 28-08-2024 ರಂದು ಕೆ.ಪಿ.ಎಸ್ ಕಳಸ ಪ್ರೌಢಶಾಲೆಯ ಆತಿಥ್ಯದಲ್ಲಿ ನಯೆಯಿತು. ಕಳಸದ ಜೆ. ಇ. ಎಮ್ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಶ್ರೀನಿಧಿ 800ಮೀ, 1500ಮೀ ಮತ್ತು 3000ಮೀ ಓಟದಲ್ಲಿ ಪ್ರಥಮ ಸ್ಥಾನ ಪಡೆದು ಬಾಲಕರ ವಿಭಾಗದ ವೈಯಕ್ತಿಕ ಚಾಂಪಿಯನ್ ಆಗಿದ್ದು ಹಾಗೂ ಹತ್ತನೇ ತರಗತಿ ವಿದ್ಯಾರ್ಥಿನಿ ಮಾನ್ವಿ ವಿ ಶೆಟ್ಟಿ 200ಮೀ, 400ಮೀ ಮತ್ತು ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಬಾಲಕಿಯರ ವಿಭಾಗದ ವೈಯಕ್ತಿಕ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ಅದೇ ರೀತಿ ಬಾಲಕರ ವಿಭಾಗದ ಖೋ – ಖೋ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಒಟ್ಟಾರೆ ಅಥ್ಲೆಟಿಕ್ಸ್ ವಿಭಾಗದಲ್ಲಿ ಅತಿ ಹೆಚ್ಚು ಬಹುಮಾನ ಗಳನ್ನ ಪಡೆಯುವುದರ ಮೂಲಕ 2024-25 ನೇ ಸಾಲಿನ ಕಳಸ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿಯನ್ನು ಮತ್ತೊಮ್ಮೆ ತನ್ನ ಮುಡಿಗೇರಿಸಿಕೊಂಡಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವರ್ಗ ಹಾಗೂ ಪೆÇೀಷಕ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.
Related Stories
September 18, 2024