ಕಳಸ ಲೈವ್ ವರದಿ
ಕಳಸ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಸುಹಾಸ್ ಎಂ.ಡಿ ಕಾಲ್ನಡಿಗೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಚಿಕ್ಕಮಗಳೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಈ ವಿದ್ಯಾರ್ಥಿ 5000 ಮೀ ಕಾಲ್ನಡಿಗೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
400 ಮೀ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದ ಚೈತನ್ಯ ಎ.ಎಸ್ ತೃತೀಯ, 3000 ಮೀ ಓಟದ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಸೃಜನ್ ತೃತೀಯ ಸ್ಥಾನ ಪಡೆದಿರುತ್ತಾರೆ ಎಂದು ಕಾಲೇಜಿನ ಪ್ರಾಚಾರ್ಯ ಅನಂತಪದ್ಮನಾಭ ತಿಳಿಸಿದ್ದಾರೆ.
ವಿಜೇತ ವಿದ್ಯಾರ್ಥಿಗಳನ್ನು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.
Related Stories
October 6, 2024