
ಕಳಸ ಲೈವ್ ವರದಿ
ಕಳಸ ತಾಲ್ಲೂಕಿನ ವಿವಿಧ ಕ್ಷೇತ್ರದ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಕಳಸ ತಾಲ್ಲೂಕು ಆಡಳಿತದಿಂದ ಪ್ರಶಸ್ತಿ ನೀಡುವುದನ್ನು ಕೈ ಬಿಟ್ಟಿರುವುದಕ್ಕೆ ಡಾ.ರಾಜ್ ಕನ್ನಡ ಸಂಘದ ಅಧ್ಯಕ್ಷ ಕನ್ನಡ ರಾಜು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು ಕಳಸದ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಕಳೆದ ಎರಡು ದಿನಗಳ ಹಿಂದೆ ನಡೆದ ಕನ್ನಡ ರಾಜ್ಯೋತ್ಸವದ ಬಗ್ಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಕಳಸ ತಾಲ್ಲೂಕಿನಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಮಾಡುವ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು. ಆದರೆ ನಂತರದ ದಿನಗಳಲ್ಲಿ ಅದನ್ನು ಕೈ ಬಿಡಲಾಗಿದೆ. ಇದು ಸಾಧಕರಿಗೆ ಮಾಡಿರುವ ಅವಮಾನವಾಗಿದೆ. ಇನ್ನು ಸಮಯ ಮೀರದೆ ಇರುವುದರಿಂದ ಕೂಡಲೇ ಈ ಬಗ್ಗೆ ತೀರ್ಮಾನ ತೆಗೆದುಕೊಂಡು ಸಾಧಕರನ್ನು ಗೌರವಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದ್ದಾರೆ.