ಕಳಸ ಲೈವ್ ವರದಿ
ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಿಗೆ ಧರ್ಮಕರ್ತ ಜಿ.ಭೀಮೇಶ್ವರ ಜೋಷಿ ದಂಪತಿಗಳ ಮುಖಾಂತರ ನೂತನ ರಜತ ಪಲ್ಲಕಿಯನ್ನು ಸಮರ್ಪಿಸಲಾಯಿತು.
ಭಾನುವಾರ ಬೆಳಿಗ್ಗೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳ ನಂತರ ಸಮಸ್ತ ಭಕ್ತಾಧಿಗಳ ಸಮ್ಮುಖದಲ್ಲಿ ಶ್ರೀ ಮಾತೆಗೆ ರಜತ ಪಲ್ಲಕಿಯನ್ನು ಸಮರ್ಪಿಸಲಾಯಿತು.
ಸಂಜೆ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ರಾಮ ನಿರ್ಯಾಣ ಎಂಬ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ನಡೆಯಿತು.
ನವಂಬರ್ 18ರಂದು ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 16ನೇ ವರ್ಷದ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಲಿದೆ.ನಂತರದಲ್ಲಿ ಶ್ರೀ ಉದ್ಭವ ಗಣಪತಿ ಸ್ವಾಮಿಗೆ ಲಕ್ಷದೂರ್ವರ್ಚನೆ, ಸಂಜೆ ಶ್ರೀ ಮಾತೆಗೆ ದೀಪೋತ್ಸವ ಹಾಗೂ ಪ್ರಾಂಗಣ ಪಲ್ಲಕ್ಕಿ ಉತ್ಸವ ನಡೆಯಲಿದೆ.
ಸಾಂಸ್ಕøತಿಕ ಕಾರ್ಯಕ್ರಮದ ಅಂಗವಗಿ ಸಂಜೆ ಭರತನಾಟ್ಯ ನಡೆಯಲಿದೆ.



