![](https://www.kalasalive.com/wp-content/uploads/2024/12/IMG20241202172106.jpg)
oplus_0
ಕಳಸ ಲೈವ್ ವರದಿ
ಫೆಂಗಲ್ ಚಂಡಮಾರುತ ದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳು ದಿನಾಂಕ 3-12-2024 ರಂದು ಆರೆಂಜ್ ಅಲರ್ಟ್ ಹಾಗೂ ದಿನಾಂಕ 4-12-2024 ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ ಈ ಹಿನ್ನೆಲೆಯಲ್ಲಿ ಜಿಲ್ಲೆಯಾಧ್ಯಂತ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರವು ಮುಂಜಾಗ್ರತ ಕ್ರಮ ವಹಿಸಬೇಕಾಗಿದ್ದು ಸಾರ್ವಜನಿಕರಿಗೆ ಮುಂದಿನ ಎರಡು ದಿನಗಳು ಅಥವಾ ಮಳೆ ಕಡಿಮೆಯಾಗುವವರೆಗೆ ಈ ಕೆಳಕಂಡ ಸೂಚನೆಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.
ಸಾರ್ವಜನಿಕರು ನದಿಗಳಿಗೆ ಅಥವಾ ತಗ್ಗು ಪ್ರದೇಶಗಳಿಗೆ ತೆರಳದಂತೆ ಕಟ್ಟೆಚ್ಚರ ವಹಿಸುವುದು ಮತ್ತು ಸಾರ್ವಜನಿಕರು ಜಾನುವಾರುಗಳನ್ನು ಅಥವಾ ಬಟ್ಟೆಗಳನ್ನು ತೊಳೆಯಲು ಹಳ್ಳ, ಕೆರೆ ಕಟ್ಟೆಗಳಿಗೆ ತೆರಳತಕ್ಕದ್ದಲ್ಲ. ಮಳೆಯಿಂದಾಗಿ ಧರೆ ಗುಡ್ಡ ಕುಸಿತ ಉಂಟಾಗುವ ಸಂಭವಿಸುವುದರಿಂದ ಸಾರ್ವಜನಿಕರು ಎಚ್ಚರವಹಿಸುವುದು ಮೇಲ್ಕಂಡ ಸೂಚನೆಗಳನ್ನು ಪಾಲಿಸುವ ಮೂಲಕ ಸಾರ್ವಜನಿಕರು ಯಾವುದೇ ಅಪಾಯಕಾರಿ ಘಟನೆಗಳಿಗೆ ಅವಕಾಶ ಕೊಡದೆ ಜಿಲ್ಲಾಡಳಿತಕ್ಕೆ ಸಹಕಾರ ನೀಡಲು ತಿಳಿಸಲಾಗಿದೆ.