
ಕಳಸ ಲೈವ್ ವರದಿ
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ಸೂಚಿಸಿದೆ.
ಮೃತರ ಅಂತ್ಯಕ್ರಿಯೆಯನ್ನು ಡಿ.11ರಂದು ಬುಧವಾರದಂದು ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು.
ದಿವಂಗತರ ಗೌರವಾರ್ಥ ಡಿ.11ರಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಎಲ್ಲಾ ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ) ಸಾರ್ವಜನಿಕ ರಜೆ ಘೋಷಿಸಲಾಗಿದೆ.
ಡಿ.10ರಿಂದ 12ರವರೆಗೆ ಮೂರು ದಿನಗಳು ರಾಜ್ಯಾದ್ಯಂತ ಶೋಕಾಚರಣೆ ಮಾಡಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿμÉೀಧಿಸಲಾಗಿದೆ. ನಿಯತವಾಗಿ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸುವಂತೆ ಸರ್ಕಾರಿ ಆದೇಶ ಹೊರಡಿಸಲಾಗಿದೆ.