
ಕಳಸ ಲೈವ್ ವರದಿ
ಕಳಸ ಪದವಿ ಪೂರ್ವ ಕಾಲೇಜು ಪ್ರಥಮ ಪಿಯು ವಿದ್ಯಾರ್ಥಿನಿ ಪ್ರಣಮ್ಯ ಡೊಂಗ್ರೆ ಭಾವಗೀತೆ ಸ್ಪರ್ಧೆ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ದಿನಾಂಕ 9.11.2024 ರಂದು ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕøತಿಕ ಸ್ಪರ್ಧೆಗಳ ಭಾವಗೀತೆ ಸ್ಪರ್ಧೆಯ ವಿಭಾಗದಲ್ಲಿ ಈ ವಿದ್ಯಾರ್ಥಿನಿ ತೃತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರಿಗೆ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರುಗಳು, ಕಾಲೇಜಿನ ಪ್ರಾಂಶುಪಾಲರ, ಉಪನ್ಯಾಸಕರ ಹಾಗೂ ವಿದ್ಯಾರ್ಥಿಗಳ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.







