

ಕಳಸ ಲೈವ್ ವರದಿ
ಕಳಸ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳು ನಾಮ ಪತ್ರ ಸಲ್ಲಿಸಿದ್ದಾರೆ.
ಇದೇ ತಿಂಗಳ 22ರಂದು ಕಳಸ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಕಾಂಗ್ರೇಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳಾದ ಕೆ.ಸಿ.ಮಹೇಶ್ ಯಡದಾಳು, ದೇಜಪ್ಪ ಪೂಜಾರಿ, ಮಧುವನ್ ಹೊರನಾಡು ನಾಮ ಪತ್ರ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಕಳಸ ಬ್ಲಾಕ್ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಕೆ.ಎ.ಶ್ರೇಣಿಕ್, ಕೆಪಿಸಿಸಿ ಸದಸ್ಯ ಕೆ.ಆರ್.ಪ್ರಭಾಕರ್, ಮಾಜಿ ತಾಪಂ ಸದಸ್ಯರಾದ ರಾಜೇಂದ್ರ ಪ್ರಸಾದ್, ಮಹಮ್ಮದ್ ರಫೀಕ್, ಹೊರನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಧುಕುಮಾರ್, ಕಳಸ ಗ್ರಾಮ ಪಂಚಾಯಿತಿ ಸದಸ್ಯ ವೀರೇಂದ್ರ ಜೈನ್, ಮುಖಂಡರಾದ ಗಣೇಶ್ ಭಟ್, ರಾಮಚಂದ್ರ ಹೆಬ್ಬಾರ್ ಇತರರು ಇದ್ದರು.





