oplus_0
ಕಳಸ ಲೈವ್ ವರದಿ
ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಬುಧವಾರ ಕಲಶೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದರು
ಬುಧವಾರ ಮಧ್ಯಾಹ್ನ ದೇವಸ್ಥಾನಕ್ಕೆ ಬೇಟಿ ನೀಡಿದ ಅವರು ರುದ್ರಾಭಿಷೇಕ ಪೂಜೆ ಮಾಡಿಸಿ ನಂತರ ಸರ್ವಾಂಗ ಸುಂದರಿ, ಆನೆಗಣಪತಿ ದೇವರ ದರ್ಶನ ಪಡೆದರು.
ಕಲಶೇಶ್ವರ ದೇವರ ಜಾತ್ರಾ ಮಹೋತ್ಸವ ನಡೆಯುತ್ತಿರುವ ಹಿನ್ನಲೆಯಲ್ಲಿ ದೇವಸ್ಥಾನಕ್ಕೆ ಬೇಟಿ ನೀಡಿದ್ದೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಲಶೇಶ್ವರ ದೇವಸ್ಥಾನ ವ್ಯವಸ್ಥಾನ ಸಮಿತಿ ಅಧ್ಯಕ್ಷ ವೆಂಕಟಸುಬ್ಬಯ್ಯ, ಸದಸ್ಯರಾದ ಕೆ.ಕೆ.ಬಾಲಕೃಷ್ಣ ಭಟ್, ಸತೀಶ್, ಕೆಪಿಸಿಸಿ ಸದಸ್ಯ ಕೆ.ಆರ್.ಪ್ರಭಾಕರ್, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಶಿವಾನಂದ ಸ್ವಾಮಿ, ತಾಲ್ಲೂಕು ಅಧ್ಯಕ್ಷ ಗಣೇಶ್ ಭಟ್, ಕಳಸ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ವಿಶ್ವನಾಥ, ಕಳಸ ಗ್ರಾಮ ಪಂಚಾಯಿತಿ ಸದಸ್ಯ ವೀರೇಂದ್ರ ಜೈನ್, ಶಾಸಕರ ಆಪ್ತ ಸಹಾಯಕ ಸಂಸುದ್ದೀನ್ ಇದ್ದರು.




