
ಕಳಸ ಲೈವ್ ವರದಿ
ಚಿತ್ರದುರ್ಗದಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಳಸ ಪ್ರಬೋಧಿನಿ ವಿದ್ಯಾ ಕೇಂದ್ರದ ವಿದ್ಯಾರ್ಥಿನಿ ಆಶ್ರಿತಾ ರೈ ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ತುಳು ಬಾಷಣ ಸ್ಪರ್ಧೆಯಲ್ಲಿ ಇದೇ ಶಾಲೆಯ ವಿದ್ಯಾರ್ಥಿ ಯಶವಂತ್ ತೃತೀಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಹಾಗೂ ಶಾಲೆಯ ಆಡಳಿತ ಮಂಡಳಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
