










































ಕಳಸ ಲೈವ್ ವರದಿ
ಕಳಸ ತಾಲ್ಲೂಕಿನ ಮರಸಣಿಗೆ ಗ್ರಾಮದಲ್ಲಿ ಸೋಮವಾರ ಸಂಜೆ ಕಾಡಾನೆಯೊಂದು ಕಾಣಿಸಿಕೊಂಡು ಗ್ರಾಮಸ್ಥರು ಭಯಭೀತರಾಗಿದ್ದಾರೆ.
ಮರಸಣಿಗೆಯ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಚಾವಡಿಬೈಲಿನ ಗದ್ದೆಯಲ್ಲಿ ಮಹಿಳೆಯೊಬ್ಬರಿಗೆ ಒಂಟಿ ಕಾಡಾನೆ ಕಾಣಿಸಿಕೊಂಡಿದೆ.
ಮಹಿಳೆ ಗದ್ದೆಯ ಬಳಿ ಇದ್ದಾಗ ಕಾಡಾನೆ ಕಾಣಿಸಿಕೊಂಡಿದ್ದು, ಆನೆಯನ್ನು ನೋಡಿದ ಮಹಿಳೆ ಭಯಭೀತರಾಗಿ ಓಡಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಎಡೂರಿನಲ್ಲಿ ಕೂಡ ಆನೆ ಕಾಣಿಸಿಕೊಂಡಿತ್ತು. ಈ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಒಂಟಿ ಆನೆಯೊಂದು ತಿರುಗಾಡುತ್ತಿದ್ದು, ಗ್ರಾಮಸ್ಥರು ಎಚ್ಚರಿಕೆ ವಹಿಸಿಕೊಳ್ಳಬೇಕು ಎಂದು ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ವಿಶ್ವನಾಥ್ ಮರಸಣಿಗೆ ತಿಳಿಸಿದ್ದಾರೆ.
