ಕಳಸ ಲೈವ್ ವರದಿ
ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಶಸ್ತಿ ಪಡೆದ ಕಳಸ ಪ್ರಬೋಧಿನಿ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳನ್ನು ಶಾಲೆಯಲ್ಲಿ ಗೌರವಿಸಲಾಯಿತು.
ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಯ ರಂಗೋಲಿ ಸ್ಪರ್ಧೆಯಲ್ಲಿ ಆಶ್ರಿತ ರೈ ಪ್ರಥಮ ಸ್ಥಾನ ಹಾಗೂ ತುಳು ಭಾಷಣ ಸ್ಪರ್ಧೆಯಲ್ಲಿ ಯಶವಂತ್ ತೃತೀಯ ಸ್ಥಾನವನ್ನು ಪಡೆದಿದ್ದರು.
ಈ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬೆಳ್ಳಿ ಪದಕ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಆಡಳಿತ ಸಮಿತಿ ಕಾರ್ಯದರ್ಶಿ ರಾಘವೇಂದ್ರ ಭಟ್, ಸದಸ್ಯರಾದ ಬಾಲಕೃಷ್ಣ ಪ್ರಭು, ಶಾಲಾ ಮುಖ್ಯ ಶಿಕ್ಷಕ ಆನಂದ್ ಇದ್ದರು.
