

ಕಳಸ ಲೈವ್ ವರದಿ
ತಾಲ್ಲೂಕಿನ ಹೆಮ್ಮಕ್ಕಿ ಭದ್ರಕಾಳಿ ಶಾಲೆಯಲ್ಲಿ ಹಿರೇಬೈಲ್ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು
ಪುಟ್ಟ ಹಳ್ಳಿಯಲ್ಲಿ ಅಚ್ಚು ಕಟ್ಟಾಗಿರುವ ಈ ಶಾಲೆಯಯನ್ನು ಕಳಸ ಜೆಸಿಐ ಸಂಸ್ಥೆಯು ದತ್ತು ಪಡೆದುಕೊಂಡು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿತ್ತು.
ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಕಳಸ ಜೆಸಿಐ ಅಧ್ಯಕ್ಷ ಶ್ರೀಕಾಂತ್ ಅವರನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು.ಕಲಿಕಾ ಹಬ್ಬದಲ್ಲಿ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ನೀಡಲಾಯಿತು.ನಂತರ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.
ಇದೇ ಶಾಳೆಯಲ್ಲಿ ಕಳೆದ 2023-24ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಮೂಡಿಗೆರೆ ತಾಲ್ಲೂಕಿನಲ್ಲಿ ಅಚ್ಚು ಕಟ್ಟಾಗಿ ನಡೆಸಿದ ಹೆಗ್ಗಳಿಕೆಗೆ ಪಾತ್ರವಾಗಿ ಪ್ರಶಸ್ತಿಯನ್ನು ಪಡೆದುಕೊಂಡಿತ್ತು.
ಶಾಲೆಯಲ್ಲಿ ನಡೆದ ಕಲಿಕಾ ಹಬ್ಬದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರವೀಣ, ಇಡಕಣಿ ಗ್ರಾಮ ಪಂಚಾಯಿತಿ ಸದಸ್ಯರಾದ ಪಾರ್ವತಿ, ಕೃಷ್ಣಯ್ಯ, ಮುಖ್ಯ ಶಿಕ್ಷಕಿ ಅಶ್ವಿನಿ, ಸಹ ಶಿಕ್ಷಕರು ವಿದ್ಯಾರ್ಥಿಗಳು, ಪೋಷಕರು ಇದ್ದರು.
