ಕಳಸ ಲೈವ್ ವರದಿ
ಗ್ರಾಮ ಪಂಚಾಯತಿ ಹೊರನಾಡು, ಪ್ರಶಮನಿ ಆಸ್ಪತ್ರೆ ಕೊಪ್ಪ, ಪ್ರಶಮನಿ ಚಾರಿಟೇಬಲ್ ಟ್ರಸ್ಟ್ ಕೊಪ್ಪ, ಪ್ರಸಾದ್ ನೇತ್ರಾಲಯ ಉಡುಪಿ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಅಂದತ್ವ ನಿವಾರಣಾ ಸಂಸ್ಥೆ ಚಿಕ್ಕಮಗಳೂರು ರೋಟರಿ ರಕ್ತ ನಿಧಿ ಶಿವಮೊಗ್ಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಚಿಕ್ಕಮಗಳೂರು, ಆಟೋ ಚಾಲಕರು ಹಾಗೂ ಮಾಲಿಕರ ಸಂಘ ಹೊರನಾಡು,ರೋಟರಿ ಸಮುದಾಯದಳ ಹೊರನಾಡು, ಸಂಜೀವಿನಿ ಒಕ್ಕೂಟ ಹೊರನಾಡು ಇವರುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 02.03.2025 ಭಾನುವಾರ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಮತ್ತು ಶಸ್ತ್ರಚಿಕಿತ್ಸಾ ಮತ್ತು ರಕ್ತದಾನ ಶಿಬಿರ ನಡೆಯಲಿದೆ.
ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 2:00 ರವರೆಗೆ ಹೊರನಾಡು ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದ್ದು, ಪ್ರಶಮನಿ ಆಸ್ಪತ್ರೆ, ಕೊಪ್ಪ ಇವರ ಸಹಯೋಗದಲ್ಲಿ ನೇತ್ರ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಪ್ರಸಾದ್ ನೇತ್ರಾಲಯ ಉಡುಪಿ ನೇತ್ರ, ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇವರ ಸಹಯೋಗದಲ್ಲಿ ರಕ್ತದಾನ ಶಿಬಿರ ಮಿಡ್ ಟೌನ್ ರೋಟರಿ ರಕ್ತನಿಧಿ ಶಿವಮೊಗ್ಗ ಇವರ ಸಹಯೋಗದಲ್ಲಿ ನಡೆಯಲಿದೆ.
