
ಕಳಸ ಲೈವ್ ವರದಿ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.), ಮಂಗಳೂರು ಬಾಳೆಹೊಳೆ – ಕಳಸ ಘಟಕದ ವತಿಯಿಂದ ಪಟ್ಲ ವಾರ್ಷಿಕ ಸಂಭ್ರಮ ದಿನಾಂಕ : 19-03-2025ನೇ ಬುಧವಾರ ಸಂಜೆ 6-30ಕ್ಕೆ ಬಾಳೆಹೊಳೆ ಶ್ರೀ ಚನ್ನಕೇಶವ ಸ್ವಾಮಿ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಹಿರಿಯ ಯಕ್ಷಗಾನ ಭಾಗವತರಾದ ಹಳುವಳ್ಳಿಯ ನಾರಿನಕೂಡಿಗೆ ಶ್ರೀ ಶಾಮಯ್ಯನವರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮತ್ತು ಇದೇ ಸಂದರ್ಭದಲ್ಲಿ ಶ್ರೀ ಜ್ಞಾನಶಕ್ತಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಕೃಪಾಪೆÇೀಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ “ತ್ರಿಜನ್ಮ ಮೋಕ್ಷ” ಎಂಬ ಪೌರಾಣಿಕ ಯಕ್ಷಗಾನ ಪ್ರದರ್ಶನವನ್ನು ಏರ್ಪಡಿಸಲಾಗಿದೆ.