
oplus_262144

ಕಳಸ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಸುನೀತ ಕುಮಾರಿ ಹಾಗೂ ಉಪಾಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಭಾಸ್ಕರ್ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದೆ ಅಧ್ಯಕ್ಷರಾಗಿದ್ದ ಬಿಜೆಪಿ ಬೆಂಬಲಿತ ಉಷಾ ವಿಶ್ವನಾಥ ಹಾಗೂ ಉಪಾಧ್ಯಕ್ಷರಾಗಿದ್ದ ಬಿಜೆಪಿ ಬೆಂಬಲಿತ ರಂಗನಾಥ್ ಅವರು ರಾಜಿನಾಮೆ ನೀಡಿದ್ದರು.
ತೆರವಾಗಿದ್ದ ಸ್ಥಾನಕ್ಕಾಗಿ ಶನಿವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸುನೀತ ಕುಮಾರಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಭಾಸ್ಕರ್ ಗೌಡ ನಾಮ ಪತ್ರ ಸಲ್ಲಿಸಿದ್ದರು.
ಬೇರೆ ಯಾರು ನಾಮ ಪತ್ರ ಸಲ್ಲಿಕೆ ಮಾಡದೆ ಇರುವ ಕಾರಣ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಅಧ್ಯಕ್ಷ ಉಪಾಧ್ಯಕ್ಷರ ಘೋಷಣೆಯಾಗುತ್ತಿದ್ದಂತೆ ಚುನಾಯಿತರ ಬೆಂಬಲಿಗರು ಪಾಟಕಿ ಸಿಡಿಸಿ ಸಂಭ್ರಮಿಸಿದರು.
ನಂತರ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಬಿಜೆಪಿ, ಜೆಡಿಎಸ್, ಸಿಪಿಐ ಮುಖಂಡರುಗಳು, ಚುನಾಯಿತರ ಅಭಿಮಾನಿಗಳು, ಸ್ನೇಹಿತರು, ಕುಟುಂಬ ವರ್ಗದವರು ಚುನಾಯಿತರಿಗೆ ಹಾರ ಹಾಕಿ ಅಭಿನಂದನೆ ಸಲ್ಲಿಸಿದರು.