ಕಳಸ ಲೈವ್ ವರದಿ
2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಳಸ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಟಿ.ಅಂಜಲಿ ಉತ್ತರ ಪತ್ರಿಕೆ ಮರು ಮೌಲ್ಯ ಮಾಪನದಲ್ಲಿ 577 ಅಂಕವನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ಈ ವಿದ್ಯಾರ್ಥಿನಿಗೆ ಮೊದಲು 560 ಅಂಕಗಳನ್ನು ಪಡೆದಿದ್ದರು. ಮರು ಮೌಲ್ಯಮಾಪನದಲ್ಲಿ ಒಟ್ಟು 5 ವಿಷಯಗಳಲ್ಲಿ ಹೆಚ್ಚುವರಿಯಾಗಿ 17 ಅಂಕವನ್ನು ಪಡೆದು ಒಟ್ಟು 577 ಅಂಕವನ್ನು ಹೆಚ್ಚಿಸಿಕೊಂಡು ಸೇ 96.17ರಷ್ಟು ಫಲಿತಾಂಶವನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು, ಪ್ರಾಚಾರ್ಯರು, ಉಪನ್ಯಾಸಕರು ಮತ್ತು ಸಿಬ್ಬಂದಿಯವರು ಅಭಿನಂದನೆ ಸಲ್ಲಿಸಿದ್ದಾರೆ.


