
ಕಳಸ ಲೈವ್ ವರದಿ
ಕಳಸ ಬಿ.ಜೆ.ಪಿ ಮಹಾ ಶಕ್ತಿ ಕೇಂದ್ರದ ವತಿಯಿಂದ ಪಕ್ಷದ ಕಚೇರಿಯಲ್ಲಿ ಸೋಮವಾರ ವಿಕಸಿತ ಭಾರತದ ಹಾಗು ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿನದ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಈ ಕಾರ್ಯಕ್ರಮದಲ್ಲಿ ವಿಕಸಿತ ಭಾರತದ ಕಾರ್ಯಾಗಾರದ ಬಗ್ಗೆ ಪ್ರಾಸ್ತಾವಿಕ ನಾಗಭೂಷಣ್ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಣ್ಯಪಾಲ್ ಕಾರ್ಯಗಾರದ ಬಗ್ಗೆ ವಿಸ್ತೃತ ವಿಚಾರಗಳನ್ನು ತಿಳಿಸಿದರು. ನಂತರ ಜಿಲ್ಲಾ ಕಾರ್ಯದರ್ಶಿ ಸುಜಯ ಸದಾನಂದ ಮತ್ತು ಗ್ರಾಮ ಪಂಚಾಯತ್ ಸದಸ್ಯರಾದ ರಂಗನಾಥ್ ಅವರು ಪ್ರಧಾನಿ ಮೋದಿ ಅವರ ವಿಚಾರಧಾರೆಗಳನ್ನು ತಿಳಿಸಿದರು. ಕಳಸ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀಕಾಂತ್ ಕಾರ್ಯಗಾರದ ಮುಂದಿನ ರೂಪುರೇಷೆಗಳ ಬಗ್ಗೆ ತಿಳಿಸಿದರು. ಕಾರ್ಯಗಾರದ ವೇದಿಕೆಯಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಯಾದ ಲೋಕೇಶ್ ಮರ್ಕಲ್, ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾದ ಬಿ.ಕೆ ಮಹೇಶ್,ಸುಂದರ್ ಶೆಟ್ಟಿ, ನಗರ ಅಧ್ಯಕ್ಷರಾದ ಪ್ರಸಿದ್ಧ ಜೈನ್, ಮಹಿಳಾ ಮೋರ್ಚಾ ಅಧ್ಯಕ್ಷರಾದ ಉಷಾ ವಿಶ್ವನಾಥ್, ಯುವ ಮೋರ್ಚಾ ಅಧ್ಯಕ್ಷರಾದ ರವಿ, ಎಸ್ ಟಿ ಮೋರ್ಚಾ ಅಧ್ಯಕ್ಷರಾದ ಉದಯ, ಮುಖಂಡರಾದ ಕಾರ್ತಿಕ್ ಶಾಸ್ತ್ರಿ, ರವಿಕುಮಾರ್, ಬೂತ್ ಅಧ್ಯಕ್ಷರು ಪದಾಧಿಕಾರಿಗಳು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.