ಕಳಸ ಲೈವ್ ವರದಿ
ಕಳಸ ಕಲಶೇಶ್ವರ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಲಾಗಿದೆ.ಅಲ್ಲದೆ ಪ್ಲಾಸ್ಟಿಕ್ ತ್ಯಾಜ್ಯವನ್ನು ಎಸೆದಲ್ಲಿ ೧೦೦೦ ದಂಡವನ್ನು ವಿಧಿಸುವುದಾಗಿ ತಿಳಿಸಿದೆ.
ಧಾರ್ಮಿಕ ದತ್ತಿ ಇಲಾಖೆಯ ಆದೇಶದಂತೆ ಈ ಕ್ರಮವನ್ನು ತೆಗೆದುಕೊಂಡಿದ್ದು, ಈ ಬಗ್ಗೆ ಈಗಾಗಲೇ ದೇವಸ್ಥಾನದ ಆವರಣದಲ್ಲಿ ಸೂಚನಾ ಫಲಕವನ್ನು ಹಾಕಲಾಗಿದ್ದು, ದೇವಾಲಯದ ಆವರಣದಲ್ಲಿ ಪ್ಲಾಸ್ಟಿಕ್ ಬಳಸುವುದನ್ನು ನಿಷೇಧಿಸಲಾಗಿದೆ.ಭಕ್ತರು ಯಾವುದೇ ಪ್ಲಾಸ್ಟಿಕ್ ಪದಾರ್ಥಗಳನ್ನು ದೇವಾಲಯದ ಆವರಣದ ಒಳಗೆ ಬಳಸಬಾರದು. ಹಾಗೆಯೆ ಪ್ಲಾಸ್ಟಿಕ್ ಕಸವನ್ನು ಎಸೆದಲ್ಲಿ ೧೦೦೦ ದಂಡವನ್ನು ವಿಧಿಸುವುದಾಗಿ ಸೂಚನಾ ಫಲಕದಲ್ಲಿ ತಿಳಿಸಲಾಗಿದೆ.
