
ಕಳಸ ಲೈವ್ ವರದಿ
ಆಗಸ್ಟ್ 13 ರಂದು ನಡೆದ ಸಂಸೆ ಯುವಕ ನಾಗೇಶ್ ಆತ್ಮಹತ್ಯೆಗೆ ಘಟನೆಗೆ ಸಂಬಂಧಿಸಿದಂತೆ ಕುದುರೆಮುಖ ಪೊಲೀಸ್ ಠಾಣೆಯ ಪೇದೆ ಸಿದ್ದೇಶ್ ನನ್ನು ಅರೆಸ್ಟ್ ಮಾಡಲಾಗಿದೆ.
ಕುದುರೆಮುಖ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಕುದುರೆಮುಖ ಪೊಲೀಸ್ ಠಾಣೆಯ ಪೇದೆ ಸಿದ್ದೇಶ್ ನನ್ನು ಚಿಕ್ಕಮಗಳೂರು ಎಸ್ ಪಿ ರವರು ನೇಮಿಸಿದ್ದ ವಿಶೇಷ ತಂಡ ಗೋವಾದಲ್ಲಿ ಅರೆಸ್ಟ್ ಮಾಡಿದೆ ಎನ್ನಲಾಗಿದೆ.