
ಕಳಸ ಲೈವ್ ವರದಿ
ಕಳಸ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನ್ಯಾಕ್ ‘ಎ’ ಗ್ರೇಡ್ ಮಾನ್ಯತೆ ಪಡೆದ ಹಿನ್ನೆಲೆಯಲ್ಲಿ, ಶಿಕ್ಷಕರ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನಾ ಪತ್ರವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತೆ ಮಂಜುಶ್ರೀ ಎನ್ ಉಪಸ್ಥಿತರಿದ್ದರು. ಕಾಲೇಜು ಪರವಾಗಿ ಪ್ರಾಂಶುಪಾಲ ವಿನಯ ಕುಮಾರ್ ಶೆಟ್ಟಿ ಎಸ್ ಅಭಪತ್ರವನ್ನು ಸ್ವೀಕರಿಸಿದರು.