
oplus_2097154
ಕಳಸ ಲೈವ್ ವರದಿ
ಕೇರಳದಲ್ಲಿ ಈ ಹಿಂದೆ ಮಹಿಳೆಯರ ಪರಿಸ್ಥಿತಿ ತುಂಬಾ ಶೋಚನೀಯವಾಗಿತ್ತು.ಕೆಳವರ್ಗದ ಜನರಿಗೆ ದೇವಸ್ಥಾನ ಪ್ರವೇಶಕ್ಕೆ ಅವಕಾಶಗಳು ಇರಲಿಲ್ಲ ಇಂತಹ ವ್ಯವಸ್ಥೆಯಲ್ಲಿ ಬದಲಾವಣೆ ತರಲು ನಾರಾಯಣ ಗುರುಗಳು ಶ್ರಮಿಸಿದರು ಎಂದು ಕಳಸ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಎಂ.ಎ.ಶೇಷಗಿರಿ ಹೇಳಿದರು.
ಕಳಸ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿಯಿಂದ ಸೋಮವಾರ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು
ಕೇರಳದಲ್ಲಿ ಜಾತಿ,ಮತ ಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ನಾರಾಯಣ ಗುರು ಅವರು ಒಬ್ಬ ಸಮಾಜದ ಸುಧಾರಕನಾಗಿ ಉದಯಿಸಿ, ಸಮಾಜದ ತಾರತಮ್ಯ ಹೋಗಲಾಡಿಸಲು ಪ್ರಯತ್ನಿಸಿದರು.ಸಮಾನತೆಯ ಸಮಾಜ ನಿರ್ಮಾಣಕ್ಕೆ ಇಡೀ ಜೀವನವನ್ನು ಮುಡಿಪಾಗಿಟ್ಟ ನಾಯಾಯಣ ಗುರು ಅವರ ತತ್ವ ಸಿದ್ದಾಂತ ಹಾಗೂ ಪ್ರತಿಪಾದಿಸಿದ ಸಂದೇಶಗಳು ಇಡೀ ಸಮಾಜಕ್ಕೆ ಮಾದರಿಯಾಗಿದೆ ಎಂದು ಹೇಳಿದರು.
ಸಂಘದ ಅಧ್ಯಕ್ಷ ಮಂಜಪ್ಪ ಪೂಜಾರಿ ಮಾತನಾಡಿ ನಾರಾಯಣ ಗುರುಗಳು ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ಮಾನವೀಯ ತತ್ವವನ್ನು ಸಾರಿದ ಮಹಾನ್ ತತ್ವಜ್ಞಾನಿ, ಸಾಮಾಜಿಕ ಧಾರ್ಮಿಕ ಪರಿವರ್ತನೆಯ ಹರಿಕಾರರಾಗಿದ್ದರು. ಇಂದು ನಾವು ಅವರ ಜಯಂತಿಯನ್ನು ಆಚರಿಸುವುದಲ್ಲದೆ ಅವರ ತತ್ವಗಳನ್ನು ನಾವು ಅಳವಡಿಸಿಕೊಳ್ಳಬೇಕು.ಆದರೆ ಇಂದು ಜಾತಿ ಧರ್ಮಗಳ ಮಧ್ಯೆ ಕಂದಕಗಳು ಸೃಷ್ಠಿಯಾಗಿದೆ.ಜಾತಿಯ ವಿಷ ಬೀಜಗಳನ್ನು ಬಿತ್ತಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಕಚೇರಿ ಶಿರೆಸ್ತೇದಾರ್ ಸುಧಾ, ಕಲಶೇಶ್ವರ ಮಳಯಾಲಿ ಸಂಘದ ಅಧ್ಯಕ್ಷ ಅಯ್ಯಪ್ಪ, ಮರಸಣಿಗೆ ಗ್ರಾಮ ಪಂಚಾಯಿತಿ ಸದಸ್ಯ ವಿಶ್ವನಾಥ, ಕಳಸ ಗ್ರಾಮ ಪಂ ಸದಸ್ಯ ವೀರೇಂದ್ರ, ಬಿಲ್ಲವ ಸಂಘದ ಕಾರ್ಯದರ್ಶಿ ಶ್ರೀನಿವಾಸ್, ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ಪೂರ್ಣಿಮಾ ಕಿಶೋರ್ ಇದ್ದರು.