
ಕಳಸ ಲೈವ್ ವರದಿ
ಕಳಸ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉಮಾಶಂಕರ್(೫೩) ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕಳೆದ ಎರಡು ವರ್ಷಗಳಿಂದ ಕಳಸ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.ಈ ಹಿಂದೆ ಲಕ್ಕವಳ್ಳಿ, ತರಿಕೆರೆ, ಕೊಪ್ಪ ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಕಳೆದ ಎರಡು ತಿಂಗಳಿನಿAದ ತೀವ್ರ ಅನಾರೋಗ್ಯಕ್ಕೀಡಾದ ಅವರು ತನ್ನ ಊರು ತರೀಕೆರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಮೃತರು ಪತ್ನಿ, ಪುತ್ರ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.