ಕಳಸ ಲೈವ್ ವರದಿ
ಕಳಸ ತಾಲ್ಲೂಕಿನ ಹೊರನಾಡು ಗ್ರಾಮ ಪಂಚಾಯಿತಿ ೨೦೨೩-೨೪ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾಗಿದೆ.
ಬೆಂಗಳೂರಿನಲ್ಲಿ ವಿಧಾನಸೌದದ ಬ್ಯಾಂಕ್ವೇಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಗ್ರಾಮಪಂಚಾಯಿತಿ ಅಧ್ಯಕ್ಷ ಮಧು ಪ್ರಸಾದ್ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅರುಣ್ ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಪ್ರಶಸ್ತಿ ಪ್ರಮಾಣಪತ್ರ, ಸ್ಮರಣಿಕೆ ಹಾಗೂ ೫ ಲಕ್ಷ ರೂ ಪ್ರೋತ್ಸಾಹಧನವನ್ನು ನೀಡಿ ಗೌರವಿಸಲಾಗಿದೆ.
