ಕಳಸ ಲೈವ್ ವರದಿ
ಇಲ್ಲಿನ ಶ್ರೀ ಅಯ್ಯಪ್ಪಸ್ವಾಮಿ ಭಕ್ತವೃಂದದ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಜೂನ್ 3, 2026ರ ಶನಿವಾರದಂದು ವೈಭವದ “ಶ್ರೀ ಶಬರಿಮಲೆ ಅಯ್ಯಪ್ಪ ಸ್ವಾಮಿ ದೀಪೋತ್ಸವ” ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ದಿನವಿಡೀ ನಡೆಯಲಿರುವ ಈ ಉತ್ಸವದಲ್ಲಿ ಹಲವಾರು ವಿಶೇಷ ಪೂಜೆಗಳು ಜರುಗಲಿವೆ:
ಬೆಳಿಗ್ಗೆ 11:00ಕ್ಕೆ: ಗಣಹೋಮ.ಮಧ್ಯಾಹ್ನ 12:30ಕ್ಕೆ: ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ. ಮಧ್ಯಾಹ್ನ 1:00 ರಿಂದ 3:00 ರವರೆಗೆ: ಭಕ್ತಾದಿಗಳಿಗೆ ಅನ್ನಸಂತರ್ಪಣೆ.
ಸAಜೆ 5:00 ಗಂಟೆಗೆ ಕೇರಳದ ಪ್ರಸಿದ್ಧ ಪಯ್ಯನ್ನೂರು ಕಲಾತಂಡದವರಿAದ ‘ಚಂಡೆ ಮೇಳ’ ವಾದ್ಯದೊಂದಿಗೆ ಶ್ರೀ ಸ್ವಾಮಿಯ ಭವ್ಯ ‘ಪಾಲುಕೊಂಬು ಮೆರವಣಿಗೆ’ ನಡೆಯಲಿದೆ. ಈ ಮೆರವಣಿಗೆಯು ಶ್ರೀ ಕಲಶೇಶ್ವರ ಸ್ವಾಮಿ ದೇವಸ್ಥಾನದಿಂದ ಹೊರಟು ಶ್ರೀ ಅಂಜನೇಯ ಸ್ವಾಮಿ ದೇವಸ್ಥಾನದವರೆಗೆ ಸಾಗಿ ಮಹಾವೀರ ರಸ್ತೆಯಲ್ಲಿ ಸಮಾಪ್ತಿಗೊಳ್ಳಲಿದೆ.
ತದನಂತರ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ದೀಪೋತ್ಸವ, ಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ನಡೆಯಲಿದೆ.
ಈ ಭಕ್ತಿಪೂರ್ವಕ ಕಾರ್ಯಕ್ರಮಕ್ಕೆ ಕಳಸ ತಾಲ್ಲೂಕಿನ ಹಾಗೂ ಸುತ್ತಮುತ್ತಲ ಭಕ್ತಾದಿಗಳು ತನು-ಮನ-ಧನಗಳಿಂದ ಸಹಕರಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ವಿನಂತಿಸಿದ್ದಾರೆ.
