ಕಳಸ ಲೈವ್ ವರದಿ
ಸಾಹಿತ್ಯಿಕ ಚಟುವಟಿಕೆಗಳ ತವರೂರು ಎನಿಸಿರುವ ಕಳಸ ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಅ.ರಾ. ಸತೀಶ್ಚಂದ್ರ ಅವರಿಗೆ ಪ್ರತಿಷ್ಠಿತ ‘ಚುಟುಕು ಸಿರಿ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಚಿಕ್ಕಮಗಳೂರು ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಶೃಂಗೇರಿ ಇವರ ಸಂಯುಕ್ತಾಶ್ರಯದಲ್ಲಿ ಶೃಂಗೇರಿಯಲ್ಲಿ ಭಾನುವಾರ ನಡೆದ ಅಖಿಲ ಭಾರತ ಕನ್ನಡ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ಸತೀಶ್ಚಂದ್ರ ಅವರ ಸಾಹಿತ್ಯಿಕ, ವಿಶೇಷವಾಗಿ ಚುಟುಕು ಸಾಹಿತ್ಯ ಕ್ಷೇತ್ರಕ್ಕೆ ಅವರು ನೀಡಿದ ಅನನ್ಯ ಕೊಡುಗೆಯನ್ನು ಪರಿಗಣಿಸಿ ಈ ಗೌರವವನ್ನು ಅರ್ಪಿಸಲಾಯಿತು..
ಅ.ರಾ. ಸತೀಶ್ಚಂದ್ರ ಅವರು ಕಳಸ ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸಕ್ರಿಯರಾಗಿದ್ದು, ಸಂಘಟನಾತ್ಮಕ ಕೆಲಸಗಳ ಜೊತೆಗೆ ಸಾಹಿತ್ಯ ರಚನೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.ವಿಶೇಷವಾಗಿ ನಾಲ್ಕು ಸಾಲುಗಳ ಚುಟುಕುಗಳ ಮೂಲಕ ಸಾಮಾಜಿಕ ಅರಿವು ಮೂಡಿಸುವ ಮತ್ತು ಸಾಹಿತ್ಯದ ಸವಿಯನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಅವರು ಯಶಸ್ವಿಯಾಗಿದ್ದಾರೆ.
ಈ ಪ್ರಶಸ್ತಿ ಲಭಿಸಿರುವುದಕ್ಕೆ ಕಳಸ ತಾಲ್ಲೂಕು ಸಾಹಿತ್ಯ ಪರಿಷತ್ತು ಹಾಗೂ ಅದರ ಅಂಗ ಸಂಸ್ಥೆಗಳ ಅಧ್ಯಕ್ಷರುಗಳು ಹಾಗೂ ಸದಸ್ಯರು ಸತೀಶ್ಚಂದ್ರ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
