ಕಳಸ ಲೈವ್ ವರದಿ
ಕನ್ನಡಪ್ರಭ ದಿನಪತ್ರಿಕೆ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಸಹಕಾರ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಸಾಧಕರಿಗಾಗಿ ನೀಡಲಾಗುವ ಪ್ರತಿಷ್ಠಿತ ‘ಕರ್ನಾಟಕ ಸಹಕಾರ ಶಿರೋಮಣಿ-2025’ ಪ್ರಶಸ್ತಿಗೆ ಕಳಸದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಿ.ಕೆ.ಮಂಜಪ್ಪಯ್ಯ ಅವರಿಗೆ ನೀಡಲಿದೆ.
ಗ್ರಾಮೀಣ ಭಾಗದ ಜನರ ಜೀವನಾಡಿಯಾಗಿರುವ ಸಹಕಾರ ಕ್ಷೇತ್ರವನ್ನು ಬಲಪಡಿಸುವ ಮತ್ತು ರೈತಪರ ಯೋಜನೆಗಳನ್ನು ಯಶಸ್ವಿಯಾಗಿ ತಲುಪಿಸುತ್ತಿರುವ ಸಂಸ್ಥೆಗಳನ್ನು ಗುರುತಿಸಿ ಈ ಗೌರವವನ್ನು ನೀಡಲಾಗುತ್ತಿದೆ.
ಸಹಕಾರ ಕ್ಷೇತ್ರದ ಸಾಧಕರನ್ನು ಗೌರವಿಸುವ ಈ ಪ್ರಶಸ್ತಿ ಪ್ರದಾನ ಸಮಾರಂಭವು ಜನವರಿ 24 ರಂದು ದಿ ಕ್ಯಾಪಿಟಲ್ ಹೋಟೆಲ್, ರಾಜಭವನ ರಸ್ತೆ, ವಸಂತ ನಗರ, ಬೆಂಗಳೂರು ನಡೆಯಲಿದೆ.
ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಸ್ಥೆಗಳು ಸಮಾಜದ ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಅಭಿಯಾನವು ಸಹಕಾರ ರಂಗಕ್ಕೆ ಹೆಚ್ಚಿನ ಚೈತನ್ಯ ನೀಡುವ ಉದ್ದೇಶ ಹೊಂದಿದೆ ಎಂದು ಆಯೋಜಕರು ತಿಳಿಸಿದ್ದಾರೆ.
