


ಕಳಸ ಲೈವ್ ವರದಿ
ಮಕರ ಸಂಕ್ರಾ0ತಿ ಹಬ್ಬದ ಸಂಭ್ರಮದ ಅಂಗವಾಗಿ, ಸರ್ಕಾರದ ಆದೇಶದನ್ವಯ ಇಲ್ಲಿನ ಐತಿಹಾಸಿಕ ಶ್ರೀ ಕಲಶೇಶ್ವರ ದೇವಸ್ಥಾನದಲ್ಲಿ ಭಕ್ತಾದಿಗಳಿಗೆ ಎಳ್ಳು-ಬೆಲ್ಲವನ್ನು ಪ್ರಸಾದ ರೂಪದಲ್ಲಿ ವಿತರಿಸಲಾಯಿತು.
ಹಿಂದೂ ಧರ್ಮದ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ, ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯು ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಮಕರ ಸಂಕ್ರಾ0ತಿಯ0ದು ಕಡ್ಡಾಯವಾಗಿ ಎಳ್ಳು-ಬೆಲ್ಲ ವಿತರಿಸಲು ಸುತ್ತೋಲೆ ಹೊರಡಿಸಿತ್ತು. ಈ ಆದೇಶವನ್ನು ಪಾಲಿಸುವ ಮೂಲಕ ಕಲಶೇಶ್ವರ ದೇವಸ್ಥಾನದ ಆಡಳಿತ ಮಂಡಳಿಯು ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರತಿಯೊಬ್ಬ ಭಕ್ತರಿಗೂ ವಿಶೇಷ ಪ್ರಸಾದದ ವ್ಯವಸ್ಥೆ ಮಾಡಿತು.
“ಹಿಂದೂ ಧರ್ಮದ ಪ್ರತಿಯೊಂದು ಹಬ್ಬವು ವೈಜ್ಞಾನಿಕ ಹಿನ್ನೆಲೆ ಹಾಗೂ ಹವಾಮಾನಕ್ಕೆ ಪೂರಕವಾದ ಮಹತ್ವವನ್ನು ಹೊಂದಿದೆ. ಇತ್ತೀಚಿನ ದಿನಗಳಲ್ಲಿ ಇಂತಹ ಸಂಪ್ರದಾಯಗಳು ಮರೆಯಾಗುತ್ತಿರುವುದನ್ನು ಮನಗಂಡು, ಧಾರ್ಮಿಕ ದತ್ತಿ ಇಲಾಖೆಯು ಎಲ್ಲರಿಗೂ ಮಕರ ಸಂಕ್ರಾ0ತಿಯ ಶುಭಫಲ ದೊರೆಯಲಿ ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಂಡಿದೆ.
