oplus_2097152
ಕಳಸ ಲೈವ್ ವರದಿ
ತಾಲ್ಲೂಕಿನ ಪ್ರಬೋಧಿನಿ ವಿದ್ಯಾ ಕೇಂದ್ರದಲ್ಲಿ ಶುಕ್ರವಾರ ಮಕರ ಸಂಕ್ರಾ0ತಿ ಹಬ್ಬವನ್ನು ಅತ್ಯಂತ ಸಡಗರ, ಸಂಭ್ರಮ ಮತ್ತು ಸಾಂಪ್ರದಾಯಿಕ ಶೈಲಿಯಲ್ಲಿ ಆಚರಿಸಲಾಯಿತು.
ಹಬ್ಬದ ಪ್ರಯುಕ್ತ ಶಾಲೆಯ ವಿದ್ಯಾರ್ಥಿಗಳು ಬಣ್ಣ ಬಣ್ಣದ ಹೊಸ ಬಟ್ಟೆಗಳನ್ನು ಧರಿಸಿ ಬರುವ ಮೂಲಕ ಶಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಿಸಿದ್ದರು. ಪರಸ್ಪರ ಎಳ್ಳುಬೆಲ್ಲವನ್ನು ಹಂಚಿಕೊ0ಡ ವಿದ್ಯಾರ್ಥಿಗಳು, “ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡಿ” ಎನ್ನುವ ಆಶಯದೊಂದಿಗೆ ಸಂಕ್ರಾ0ತಿ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.
ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಆನಂದ್ ಅವರು ವಿದ್ಯಾರ್ಥಿಗಳಿಗೆ ಹಬ್ಬದ ಮಹತ್ವವನ್ನು ವಿವರಿಸಿದರು.”ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ವಿಶೇಷ ಸ್ಥಾನವಿದೆ. ರೈತರು ಬೆಳೆದ ಫಸಲು ಮನೆಗೆ ಬರುವ ಈ ಸುಗ್ಗಿ ಕಾಲವು ಸಮೃದ್ಧಿಯ ಸಂಕೇತವಾಗಿದೆ. ವಿದ್ಯಾರ್ಥಿಗಳು ಬಾಲ್ಯದಿಂದಲೇ ನಮ್ಮ ಆಚಾರ ವಿಚಾರ ಮತ್ತು ಹಬ್ಬಗಳ ಹಿಂದಿರುವ ವೈಜ್ಞಾನಿಕ ಹಾಗೂ ಸಾಮಾಜಿಕ ಕಾರಣಗಳನ್ನು ತಿಳಿದುಕೊಳ್ಳಬೇಕು. ಇಂತಹ ಆಚರಣೆಗಳು ಮಕ್ಕಳಲ್ಲಿ ಸಾಮರಸ್ಯ ಮತ್ತು ಸಂಸ್ಕೃತಿಯ ಬಗ್ಗೆ ಗೌರವವನ್ನು ಮೂಡಿಸುತ್ತವೆ,” ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
