ಕಳಸ ಲೈವ್ ವರದಿ
ಕಳಸ ತಾಲ್ಲೂಕಿನ ಮರಸಣಿಗೆಯಲ್ಲಿ ಜನವರಿ 25ರಂದು ಹಿಂದೂ ಸಮಾಜೋತ್ಸವ ನಡೆಯಲಿದೆ.
ಅಂದು ಬೆಳಿಗ್ಗೆ 8-30ಯಿಂದ ಮರಸಣಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದ್ದು, 10.30ರಿಂದ ಸಾರ್ವಜನಿಕ ಸಮಾರಂಭ ನಡೆಯಲಿದೆ.
ಸಾರ್ವಜನಿಕ ಸಮಾರಂಭದಲ್ಲಿ ಹೊರನಾಡು ಧರ್ಮಕರ್ತ ಡಾ| ಜಿ.ಭೀಮೇಶ್ವರ ಜೋಷಿ ಗೌರವ ಉಪಸ್ಥಿತಿ ಇರಲಿದ್ದು, ಸಹಕಾರ ಭಾರತಿ ಜಿಲ್ಲಾಧ್ಯಕ್ಷ ನಯನ ಎಸ ಎಸ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮರಸಣಿಗೆ ಕೆಸುವಿನಹಕ್ಲು ರಘುನಾಥ ಎಂ.ಎನ್ ವಹಿಸಲಿದ್ದಾರೆ.ಕಾರ್ಯಕ್ರಮದ ಸ್ಥಳದಲ್ಲಿ ಗೋ ಉತ್ಪನ್ನ ಮತ್ತು ರಾಷ್ಟಿçÃಯ ಸಾಹಿತ್ಯ ಮಾರಾಟ ವ್ಯವಸ್ಥೆಯನ್ನು ಮಾಡಲಾಗಿದೆ.
