

ಕಳಸ ಲೈವ್ ವರದಿ
ಕನ್ನಡಪ್ರಭ ದಿನಪತ್ರಿಕೆ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಸಹಕಾರ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಸಾಧಕರಿಗಾಗಿ ನೀಡಲಾಗುವ ಪ್ರತಿಷ್ಠಿತ ‘ಕರ್ನಾಟಕ ಸಹಕಾರ ಶಿರೋಮಣಿ-2025’ ಪ್ರಶಸ್ತಿಯನ್ನು ಕಳಸದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಿ.ಕೆ.ಮಂಜಪ್ಪಯ್ಯ ಅವರು ಸ್ವೀಕಾರ ಮಾಡಿದರು.
ಗ್ರಾಮೀಣ ಭಾಗದ ಜನರ ಜೀವನಾಡಿಯಾಗಿರುವ ಸಹಕಾರ ಕ್ಷೇತ್ರವನ್ನು ಬಲಪಡಿಸುವ ಮತ್ತು ರೈತಪರ ಯೋಜನೆಗಳನ್ನು ಯಶಸ್ವಿಯಾಗಿ ತಲುಪಿಸುತ್ತಿರುವ ಸಂಸ್ಥೆಗಳನ್ನು ಗುರುತಿಸಿ ಈ ಗೌರವವನ್ನು ನೀಡಲಾಗಿದೆ.
ಸಹಕಾರ ಕ್ಷೇತ್ರದ ಸಾಧಕರನ್ನು ಗೌರವಿಸುವ ಈ ಪ್ರಶಸ್ತಿ ಪ್ರದಾನ ಸಮಾರಂಭವು ಫೆ 7(ಇಂದು) ದಿ ಕ್ಯಾಪಿಟಲ್ ಹೋಟೆಲ್, ರಾಜಭವನ ರಸ್ತೆ, ವಸಂತ ನಗರ, ಬೆಂಗಳೂರು ಇಲ್ಲಿ ನಡೆಯಿತು.
