ಕಳಸ ಲೈವ್ ವರದಿ
ಇಲ್ಲಿನ ಸಮೀಪದ ಬಾಳೆಹೊಳೆಯ ಬಂಟಗನಹಳ್ಳಿ ಭದ್ರಾ ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮಡಿಕೇರಿ ಮೂಲದ ಯೋಗೀಶ (೧೭) ಮತ್ತು ಅಭಿಷೇಕ್ (೨೭) ಕಾಣೆಯಾದ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಮಡಿಕೇರಿ ಭಾಗದವರಾದ ಇವರಿಬ್ಬರೂ ಬಾಳೆಹೊಳೆಯ ತೋಟವೊಂದರಲ್ಲಿ ಕೆಲಸ ಮಾಡುತ್ತಿರುವ ತಮ್ಮ ಸಂಬAಧಿಕರ ಮನೆಗೆ ಭೇಟಿ ನೀಡಿದ್ದರು. ಶನಿವಾರ ಮಧ್ಯಾಹ್ನ ಸಂಬAಧಿಕರ ಜೊತೆಯಲ್ಲಿ ಬಟ್ಟೆ ತೊಳೆಯಲು ಭದ್ರಾ ನದಿಯ ದಡಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ ಈಜಲೆಂದು ನದಿಗೆ ಇಳಿದ ಯೋಗೀಶ ಮತ್ತು ಅಭಿಷೇಕ್ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಯುವಕರು ಕಾಣೆಯಾದ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಮತ್ತು ಸಂಬAಧಿಕರು ಆತಂಕಕ್ಕೊಳಗಾಗಿದ್ದಾರೆ. ಸದ್ಯ ಸ್ಥಳೀಯರ ನೆರವಿನೊಂದಿಗೆ ಅಗ್ನಿಶ್ಯಾಮಕದಳ ಭದ್ರಾ ನದಿಯ ಪಾತ್ರದಲ್ಲಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.
