
ಕಳಸ ಲೈವ್ ವರದಿ
ಜಿಲ್ಲೆಯ ಕಳಸ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಅವಧಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ, ಸುಗಮ ಆಡಳಿತ ನಿರ್ವಹಣೆಗಾಗಿ ಹೊಸ ಆಡಳಿತಾಧಿಕಾರಿಗಳನ್ನು ನೇಮಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ನಾಗರಾಜ ಎನ್.ಎಂ. ಅವರು ಪರಿಷ್ಕೃತ ಆದೇಶ ಹೊರಡಿಸಿದ್ದಾರೆ.
2020-2025ನೇ ಸಾಲಿನ ಗ್ರಾಮ ಪಂಚಾಯಿತಿ ಸದಸ್ಯರ 5 ವರ್ಷಗಳ ಅವಧಿಯು ಜನವರಿ 2026 ರಿಂದ ವಿವಿಧ ಹಂತಗಳಲ್ಲಿ ಮುಕ್ತಾಯಗೊಳ್ಳುತ್ತಿದೆ. ಹೊಸ ಚುನಾವಣೆ ನಡೆದು ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಯಾಗುವವರೆಗೆ ಪಂಚಾಯಿತಿಗಳ ದೈನಂದಿನ ಕೆಲಸ ಕಾರ್ಯಗಳಿಗೆ ಅಡ್ಡಿಯಾಗದಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರನ್ವಯ ಈ ನೇಮಕ ಮಾಡಲಾಗಿದೆ.
ಹಿಂದೆ ನೇಮಕವಾಗಿದ್ದ ಕೆಲವು ಅಧಿಕಾರಿಗಳಿಗೆ ತಾಂತ್ರಿಕ ಕಾರಣಗಳಿಂದ ‘ಪಂಚತ0ತ್ರ 2.0’ ಮತ್ತು ‘ಇ-ಸ್ವತ್ತು’ ತಂತ್ರಾ0ಶಗಳನ್ನು ಬಳಸಲು ತೊಂದರೆಯಾಗುತ್ತಿತ್ತು. ಇದನ್ನು ಸರಿಪಡಿಸಲು ಕಳಸ ಮತ್ತು ಹೊರನಾಡು ಗ್ರಾಮ ಪಂಚಾಯಿತಿಗೆ ಎಂ.ಎಲ್ ಮಂಜುನಾಥ್ ಕಾರ್ಯ ನಿರ್ವಹಕ ಅಧಿಕಾರಿಗಳು, ಹಿಂದೂ ಧಾರ್ಮಿಕ ಹಾಗೂ ಧರ್ಮದತ್ತಿ ಇಲಾಖೆ, ಕಳಸ. ಇಡಕಣಿ ಗ್ರಾಮ ಪಂಚಾಯಿತಿಗೆ ವಲಯ ಅರಣ್ಯಾಧಿಕಾರಿಗಳು, ಕುದುರೆಮುಖ ವಲಯ, ಅರಣ್ಯ ಇಲಾಖೆ, ಕಳಸ.
ಆಡಳಿತಾಧಿಕಾರಿಗಳ ಜವಾಬ್ದಾರಿಗಳು: ಗ್ರಾಮ ಪಂಚಾಯಿತಿಯ ಹಣಕಾಸಿನ ವ್ಯವಹಾರವನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಜಂಟಿಯಾಗಿ ನಿರ್ವಹಿಸುವುದು.ಸಭೆಗಳ ಆಯೋಜನೆ: ವಾರ್ಡ್ ಸಭೆ ಮತ್ತು ಗ್ರಾಮ ಸಭೆಗಳನ್ನು ಕಾಲಕಾಲಕ್ಕೆ ನಡೆಸುವುದು. ಗ್ರಾಮ ಪಂಚಾಯಿತಿಯ ಅಧ್ಯಕ್ಷರ ಎಲ್ಲಾ ಅಧಿಕಾರ ಮತ್ತು ಕರ್ತವ್ಯಗಳನ್ನು ಚಲಾಯಿಸುವುದು. ಯಾವುದೇ ಹೊಸ ನೌಕರರ ನೇಮಕಾತಿಯನ್ನು ಮಾಡುವಂತಿಲ್ಲ. ಗ್ರಂಥಾಲಯಗಳ ನಿರ್ವಹಣೆ ಮತ್ತು ನೌಕರರಿಗೆ ಕನಿಷ್ಠ ವೇತನ ಪಾವತಿಯನ್ನು ಖಚಿತಪಡಿಸಿಕೊಳ್ಳುವುದು.
