ಕಳಸ ಲೈವ್ ವರದಿ
ಕಳಸ ತಾಲ್ಲೂಕಿನ ಗಂಗನಕುಡಿಗೆ ಕುಂಬಳಡಿಕೆ ಎಂಬಲ್ಲಿ ನೆಲೆಸಿರುವ ಪುಣ್ಯಕ್ಷೇತ್ರ ಸ್ವಾಮಿ ಕೊರಗಜ್ಜ ಹಾಗೂ ಗುಳಿಗ ದೈವದ ಸಾನಿಧ್ಯದಲ್ಲಿ ಮಾರ್ಚ್ 14, 2026ರ ಶನಿವಾರದಂದು “ಕಾಲಾವಧಿ ನೇಮೋತ್ಸವ” ಅತ್ಯಂತ ವಿಜೃಂಭಣೆಯಿAದ ಜರುಗಲಿದೆ.
ಕ್ಷೇತ್ರದ ಸಂಪ್ರದಾಯದ0ತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ದೈವಗಳ ನೇಮೋತ್ಸವ ನಡೆಯಲಿದ್ದು, ಭಕ್ತಾಭಿಮಾನಿಗಳಿಗೆ ಅಂದು ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ.
ಸಂಜೆ 7.30ಕ್ಕೆ: ಸಾರ್ವಜನಿಕ ಅನ್ನಸಂತರ್ಪಣೆ ಆರಂಭವಾಗಲಿದೆ. ರಾತ್ರಿ 8.30ಕ್ಕೆ: ಗುಳಿಗ ದೈವದ ನೇಮೋತ್ಸವ ನಡೆಯಲಿದೆ. ರಾತ್ರಿ 10.30ಕ್ಕೆ: ದೀವಟಿಗೆಯ ಬೆಳಕಿನೊಂದಿಗೆ ಭವ್ಯವಾದ “ಸ್ವಾಮಿ ಕೊರಗಜ್ಜನ ಕೋಲ” ನೆರವೇರಲಿದೆ.
ಈ ಪುಣ್ಯಪ್ರದ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸ್ವಾಮಿ ಕೊರಗಜ್ಜನ ಗಂಧ ಪ್ರಸಾದವನ್ನು ಸ್ವೀಕರಿಸಿ ದೈವದ ಕೃಪೆಗೆ ಪಾತ್ರರಾಗಬೇಕೆಂದು ಸಮಿತಿಯ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು:94834 72833, 94498 98815, 94802 02476
