ಕಳಸ ಲೈವ್ ವರದಿ
2026ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇ. 99 ರಷ್ಟು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ.
ಒಟ್ಟು ಹಾಜರಾತಿ: ಪರೀಕ್ಷೆ ಬರೆದ 97 ವಿದ್ಯಾರ್ಥಿಗಳಲ್ಲಿ 96 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಒಟ್ಟು 14 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಯಾಗಿದ್ದರೆ, 57 ವಿದ್ಯಾರ್ಥಿಗಳು ಪ್ರಥಮ ದರ್ಜೆ, 20 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಹಾಗೂ 5 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಕಲಾ ಮತ್ತು ವಿಜ್ಞಾನ ವಿಭಾಗಗಳಲ್ಲಿ ಶೇ. 100 ರಷ್ಟು ಫಲಿತಾಂಶ ಬಂದಿದ್ದು, ವಾಣಿಜ್ಯ ವಿಭಾಗದಲ್ಲಿ ಶೇ. 97.91 ರಷ್ಟು ಫಲಿತಾಂಶ ದಾಖಲಾಗಿದೆ.
ಕಾಲೇಜಿನ ವಾಣಿಜ್ಯ ವಿಭಾಗದ ಕುಮಾರಿ ಮಧುರ ಬಿ. ಪಿ ಅವರು 582 (97%) ಅಂಕಗಳನ್ನು ಪಡೆಯುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನವನ್ನು ಅಲಂಕರಿಸಿದ್ದಾರೆ.
ವಾಣಿಜ್ಯ ಕುಮಾರಿ ಮಧುರ ಬಿ. ಪಿ 582 (97%), ಕಲಾ ವಿಭಾಗ ಕುಮಾರಿ ರಕ್ಷಾ 570 (95%), ವಿಜ್ಞಾನ ವಿಭಾಗ ಕುಮಾರಿ ತೇಜಾ ಕೆ. ವಿ 525 (87.5%) ಅಂಕ ಪಡೆದಿದ್ದಾರೆ.
ಕಾಲೇಜಿನ ಈ ಅತ್ಯುತ್ತಮ ಸಾಧನೆಗೆ ಕಾರಣರಾದ ವಿದ್ಯಾರ್ಥಿಗಳನ್ನು ಮತ್ತು ಮಾರ್ಗದರ್ಶನ ನೀಡಿದ ಉಪನ್ಯಾಸಕ ವೃಂದವನ್ನು ಕಾಲೇಜಿನ ಪ್ರಾಚಾರ್ಯ ಅನಂತಪದ್ಮನಾಭ ಅಭಿನಂದಿಸಿದ್ದಾರೆ.
ಅಲ್ಲದೆ, ಕೆ.ಪಿ.ಎಸ್.ನ ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷರಾದ ಮಹಮ್ಮದ್ ರಫೀಕ್, ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ. ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ ವಿದ್ಯಾರ್ಥಿಗಳ ಸಾಧನೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
