ಕಳಸ ಲೈವ್ ವರದಿ
ಶ್ರೀ ಕ್ಷೇತ್ರ ಧರ್ಮಸ್ಥಳದ ವಿವಿಧ ಅಂಗಸ0ಸ್ಥೆಗಳ ಸಂಯುಕ್ತ ಆಶ್ರಯದಲ್ಲಿ 46ನೇ ಬೃಹತ್ ಬೇಸಿಗೆ ಯೋಗೋತ್ಸವ ಶಿಬಿರವು ಕಳಸದ ಶ್ರೀ ಕಲಶೇಶ್ವರ ಸಭಾಭವನದಲ್ಲಿ ಉದ್ಘಾಟನೆಗೊಂಡಿತು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ (ಶಾಂತಿವನ ಟ್ರಸ್ಟ್) ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ಶೃಂಗೇರಿ, ಕಳಸ – ನರಸಿಂಹರಾಜಾಪುರ ತಾಲ್ಲೂಕು) ಇವರ ಸಹಯೋಗದಲ್ಲಿ ಈ 7 ದಿನಗಳ ಶಿಬಿರವನ್ನು ಆಯೋಜಿಸಲಾಗಿದೆ.

ಶ್ರೀಮತಿ ಸಾವಿತ್ರಿ ಜಿ. ಜೋಷಿ ಅವರು ಶಿಬಿರವನ್ನು ಜ್ಯೋತಿ ಬೆಳಗುವ ಮೂಲಕ ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಶ್ರೀ ಮುರಳೀಧರ ಭಟ್ ಅವರು ವಹಿಸಿದ್ದರು.
ಜಿಲ್ಲಾ ನಿರ್ದೇಶಕರಾದ ಶ್ರೀ ಸದಾನಂದ ಬಂಗೇರ ಅವರು ಯೋಜನೆಯ ವಿವಿಧ ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ, ಯೋಗದ ಮಹತ್ವವನ್ನು ವಿವರಿಸಿದರು. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕರಾದ ಡಾ|| ಐ. ಶಶಿಕಾಂತ್ ಜೈನ್ ಅವರು ಕಾರ್ಯಕ್ರಮದ ಉದ್ದೇಶ ಹಾಗೂ ಶಿಬಿರದ ರೂಪುರೇಷೆಗಳ ಬಗ್ಗೆ ಮಾತನಾಡಿದರು.
ಈ ಯೋಗೋತ್ಸವವು ಮುಂದಿನ 7 ದಿನಗಳ ಕಾಲ ಕಳಸ, ಶೃಂಗೇರಿ ಹಾಗೂ ಎನ್ಆರ್ಪುರ ವ್ಯಾಪ್ತಿಯ ವಿವಿಧ ಹಳ್ಳಿಗಳಲ್ಲಿ ನಡೆಯಲಿದೆ. ಸಾರ್ವಜನಿಕರಿಗಾಗಿ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಆಯಾ ಕೇಂದ್ರಗಳಲ್ಲಿ 1 ಗಂಟೆಯ ಕಾಲ ಯೋಗಾಸನ, ಪ್ರಾಣಾಯಾಮ ಹಾಗೂ ಧ್ಯಾನ ತರಗತಿಗಳನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಶ್ರೀ ಅನ್ನಪೂರ್ಣೇಶ್ವರಿ ಮೋಟಾರ್ಸ್ ಮಾಲೀಕರಾದ ಶ್ರೀ ಬಾಲಕೃಷ್ಣ ಭಟ್, ಮಧ್ಯವರ್ಜನಾ ಶಿಬಿರದ ಅಧ್ಯಕ್ಷರಾದ ಶ್ರೀ ಎಂ.ಎ. ಶೇಷಗಿರಿ, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಶ್ರೀಮತಿ ಸುಜಯಾ ಸದಾನಂದ ಮತ್ತು ಶ್ರೀ ಬ್ರಹ್ಮದೇವ ಜೈನ್, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಶ್ರೀ ಬಿ.ಕೆ. ಮಹೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ತಾಲ್ಲೂಕು ಯೋಜನಾಧಿಕಾರಿಗಳಾದ ಸುರೇಶ್ ಅವರು ಅತಿಥಿಗಳನ್ನು ಸ್ವಾಗತಿಸಿದರು. ಸೇವಾಪ್ರತಿನಿಧಿ ರಾಮ್ ಪ್ರಕಾಶ್ ಅವರು ಕಾರ್ಯಕ್ರಮದ ಕೊನೆಯಲ್ಲಿ ವಂದನಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಯೋಗ ಶಿಕ್ಷಕರು, ಮೇಲ್ವಿಚಾರಕರು ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಯೋಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
