ಕಳಸ ಲೈವ್ ವರದಿ
ಭಾರತೀಯ ಜನತಾ ಪಾರ್ಟಿ ಕಳಸ ಹೋಬಳಿ ಮಹಾ ಶಕ್ತಿ ಕೇಂದ್ರದ ವತಿಯಿಂದ ನೂತನ ಅಧ್ಯಕ್ಷರ ಜವಾಬ್ದಾರಿ ಸ್ವೀಕಾರ ಸಮಾರಂಭ ಹಾಗೂ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಏಪ್ರಿಲ್ 22ರಂದು ಹಮ್ಮಿಕೊಳ್ಳಲಾಗಿದೆ.
ದಿನಾಂಕ: 22.04.2026, ಬುಧವಾರ ಸಮಯ: ಮಧ್ಯಾಹ್ನ 3:00 ಗಂಟೆಗೆ ಸ್ಥಳ: ರೋಟರಿ ಭವನ, ಕಳಸ
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಳಸ ಹೋಬಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ಶ್ರೀಕಾಂತ್ ಕೆಳಭಾಗ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ಸರ್ಕಾರದ ವಿಧಾನಪರಿಷತ್ ಉಪಸಭಾಪತಿಗಳಾದ ಶ್ರೀ ಎಂ.ಕೆ. ಪ್ರಾಣೇಶ್, ವಿಧಾನಪರಿಷತ್ ಸದಸ್ಯರಾದ ಶ್ರೀ ಸಿ.ಟಿ. ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕರಾದ ಶ್ರೀ ಸುನಿಲ್ ಕುಮಾರ್ ಸೇರಿದಂತೆ ಹಲವು ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.
ಗೌರವ ಉಪಸ್ಥಿತಿಯಲ್ಲಿ ಮಾಜಿ ಸಚಿವ ಜೀವರಾಜ್, ಜಿಲ್ಲಾ ಬಿಜೆಪಿ ಅಧ್ಯಕ್ಷ ದೇವರಾಜ್ ಶೆಟ್ಟಿ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿರಲಿದ್ದಾರೆ.
ನೂತನ ಅಧ್ಯಕ್ಷರ ಪದಗ್ರಹಣದ ಈ ಮಹತ್ವದ ಸಂದರ್ಭದಲ್ಲಿ ಪಕ್ಷದ ಎಲ್ಲಾ ಹಿರಿಯ-ಕಿರಿಯ ಮುಖಂಡರು, ಕಾರ್ಯಕರ್ತರು, ಹಿತೈಷಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಮಹೇಶ್ ಬಸರಿಕಲ್ಲು ಮತ್ತು ಶ್ರೀ ಸುಂದರ್ ಶೆಟ್ಟಿ ಎಸ್.ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
