Blog

Spread the love

ಕಳಸ ಲೈವ್ ವರದಿ
ಉತ್ತಮ ಮಳೆಗಾಗಿ ಕಳಸದ ಶ್ರೀ ಕಲಶೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಾರ್ಚ್ 15ರ ಭಾನುವಾರ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ ಪ್ರಾರ್ಥನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಶ್ರೀ ಕಲಶೇಶ್ವರಸ್ವಾಮಿ ಧಾರ್ಮಿಕ ಸೇವಾ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗಿರುವ ಈ ಧಾರ್ಮಿಕ ಕಾರ್ಯಕ್ರಮವು ಅಂದು ಬೆಳಿಗ್ಗೆಯಿಂದಲೇ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ.
ಶ್ರೀ ಕಲಶೇಶ್ವರಸ್ವಾಮಿ ಸನ್ನಿಧಿಯಲ್ಲಿ ಶತವಾರ ರುದ್ರಾಭಿಷೇಕ ಹಾಗೂ ಏಕಾದಶರುದ್ರ ಹೋಮ. ಶ್ರೀ ಸರ್ವಾಂಗಸುAದರಿ ಅಮ್ಮನವರ ಸನ್ನಿಧಿಯಲ್ಲಿ ಸಹಸ್ರನಾಮ ಕುಂಕುಮಾರ್ಚನೆ. ಶ್ರೀ ಆನೆವಿಘ್ನೇಶ್ವರಸ್ವಾಮಿ ಸನ್ನಿಧಿಯಲ್ಲಿ ಅಷ್ಟೋತ್ತರ ಹಾಗೂ ಪಂಚಕಜ್ಜಾಯ ನಿವೇದನೆ.ಶ್ರೀ ಕ್ಷೇತ್ರಪಾಲ ಸನ್ನಿಧಿಯಲ್ಲಿ ಚರುಬಲಿ ಸಮರ್ಪಣೆ ನಡೆಯಲಿದೆ.
ಮಹಾ ಪೂಜೆಯ ನಂತರ ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಬಳಿಕ ಭಕ್ತಾದಿಗಳಿಗೆ ಮಹಾ ಅನ್ನಸಂತರ್ಪಣೆ ಹಾಗೂ ಲಾಡು ಪ್ರಸಾದ ವಿನಿಯೋಗ ನಡೆಯಲಿದೆ.
ಮಾರ್ಚ್ 21ರ ಶನಿವಾರದಂದು ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.